ಭಾರತದ ನಂಬರ್ 1 ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಬೆಂಗಳೂರು ಮೂಲದ ಓಲಾ ಎಲೆಕ್ಟ್ರಿಕ್ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ನವೀನ ಶೈಲಿಯ ವಿನ್ಯಾಸ ಮತ್ತು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿರುವ ವಿವಿಧ ʻಎಸ್1ʼ ಸರಣಿ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಮಾರಾಟ ಮಾಡುತ್ತಿದೆ.
ಓಲಾ ಕಂಪನಿಯು ಬಿಡುಗಡೆಗೊಳಿಸುವ ಈ ಎಲೆಕ್ಟ್ರಿಕ್ ಬೈಕ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತಿದೆ. ಸರಿ ಸುಮಾರು 50000 ರುಪಾಯಿಗೆ ಎಕ್ಸ್ ಶೋರೂಂ ದರವನ್ನು ಹೊಂದಿದೆ. ನೂತನ ಎಲೆಕ್ಟ್ರಿಕ್ ಮೋಟಾರ್ಸೈಕಲ್ನ ಬೆಲೆ, ವಿನ್ಯಾಸ ಜನರಿಗೆ ಬಹಳಾ ಹತ್ತಿರವಾಗಿದೆ. ಸದ್ಯ, ಓಲಾ ದೇಶೀಯವಾಗಿ ಹಲವು ಎಸ್1 ಸರಣಿ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಮಾರಾಟಗೊಳಿಸುತ್ತಿದೆ.
ಓಲಾ ಎಸ್1 ಎಕ್ಸ್ ಪ್ಲಸ್ (Ola S1 X+) ಆರಂಭಿಕ ಶ್ರೇಣಿ ರೂಪಾಂತರ (ಎಂಟ್ರಿ ಲೆವೆಲ್ ವೇರಿಯೆಂಟ್) ಆಗಿದ್ದು, ಹಲವು ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ದೊರೆಯುತ್ತದೆ. ಭರ್ತಿ ಚಾರ್ಜ್ನಲ್ಲಿ 91 ರಿಂದ 100 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. ರೂ 50000 ದಿಂದ ರೂ.99,999 ಎಕ್ಸ್ ಶೋರೂಂ ದರವನ್ನು ಹೊಂದಿದೆ.