ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆಯುತ್ತಿದೆ. ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಿಸಿದ್ದಾರೆ. ಜಮ್ಮು-ಕಾಶ್ಮೀರದ ಜನರು ನಮ್ಮ ಪರವಾಗಿ ಮತ ನೀಡಿದ್ದಾರೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿಕೆ ನೀಡಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷರಾಗಿರುವ ಒಮರ್ ಅಬ್ದುಲ್ಲಾ ಬುದ್ಗಾಮ್ ಮತ್ತು ಗಂದರ್ಬಾಲ್ ಕ್ಷೇತ್ರಗಳಲ್ಲಿ ಗೆದ್ದಿದ್ದಾರೆ.