ಒಂದು ರಾಷ್ಟ್ರ, ಒಂದು ಚುನಾವಣೆ ಮಹತ್ವದ ಮಸೂದೆಯನ್ನು ಗುರುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಅನುಮೋದಿಸಿದೆ. ಲೋಕಸಭೆ, ರಾಜ್ಯ ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಗೆ ಇಂದು ಅನುಮೋದನೆ ಸಿಕ್ಕಿದೆ. ಸಂಸತ್ತಿನಲ್ಲಿ ಅತೀ ಶೀಘ್ರದಲ್ಲೇ ಈ ಮಸೂದೆಯನ್ನು ಮಂಡಿಸಲು ಸಿದ್ದತೆ ನಡೆಸಲಾಗಿದೆ. ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯ ಬಗ್ಗೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ 18,626 ಪುಟಗಳನ್ನು ಒಳಗೊಂಡಿರುವ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಾರ್ಚ್ 2024ರಲ್ಲಿ ಸಲ್ಲಿಸಲಾಗಿತ್ತು.
ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ. ಕೇಂದ್ರ ಬಿಜೆಪಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯು ಐತಿಹಾಸಿಕ ಎಂದು ಬಣ್ಣಿಸಿದೆ. ಈ ಕ್ರಮವು ಚುನಾವಣಾ ವೆಚ್ಚ ಮತ್ತು ಆಡಳಿತ ಸ್ನೇಹಿಯಾಗಿದೆ ಎಂದು ಬಣ್ಣಿಸಿದೆ.