ಆನ್ಲೈನ್ ಗೇಮ್ ಚಟಕ್ಕೆ ಬಿದ್ದು ವಿಪರೀತ ಸಾಲ ಮಾಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಇಬ್ಬರು ವ್ಯಕ್ತಿಗಳು ನೇಣು ಬಿಗಿದು ಕೊಂಡಿದ್ದಾರೆ. ಆಟೋ ಚಾಲಕ ನೊಬ್ಬ ಆನ್ಲೈನ್ ಗೇಮ್ ಚಟದಿಂದ ಸಾಕಷ್ಟು ಸಾಲ ಮಾಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿ ಯಲ್ಲಿ ನಡೆದಿದೆ.
ಬಳ್ಳಾರಿ ಮೂಲದ ಕುಮಾರಸ್ವಾಮಿ (30) ಆತ್ಮಹತ್ಯೆ ಮಾಡಿಕೊಂಡವರು. ಬೆಳ್ಳಂದೂರಿನ ಎ.ಕೃಷ್ಣಪ್ಪ ನಗರದಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ನೆಲೆಸಿದ್ದರು. ವೃತ್ತಿ ಆಟೋ ಬಾಲಕನಾಗಿರುವ ಕುಮಾರಸ್ವಾಮಿ ಆನ್ಲೈನ್ ಗೇಮ್ ಚಟಕ್ಕೆ ಬಿದ್ದಿದ್ದು, ಸಾಕಷ್ಟು ಹಣ ಕಳೆದುಕೊಂಡಿದ್ದರು. ಮನೆಯಲ್ಲಿ ಯಾರೂ ಇಲ್ಲದಿರುವಾಗ ನೇಣುಗೆ ಶರಾಣಗಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ವಿಜಯನಗರ ಮೂಲದ ಮಲ್ಲಿಕಾರ್ಜುನ್ (25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪೇಯಿಂಗ್ ಗೆಸ್ಟ್ನಲ್ಲಿ ಉಳಿದುಕೊಂಡಿದ್ದ ಮಲ್ಲಿಕಾರ್ಜುನ್, ನಗರದ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಹಾಯಕನಾಗಿ ಕೆಲಸ ಮಾಡುತ್ತಿದ್ದರು.
ಕಳೆದ ನಾಲ್ಕು ವರ್ಷಗಳಿಂದ ಆನ್ಲೈನ್ ಗೇಮ್ ಚಟಕ್ಕೆ ಬಿದ್ದಿದ್ದ ಮಲ್ಲಿಕಾರ್ಜುನ್ ಸಾಕಷ್ಟು ಹಣ ಕಳೆದುಕೊಂಡಿದ್ದರು. ಇತ್ತೀಚೆಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕ್ಕಿದ್ದರು. ಹೀಗಾಗಿ ಶನಿವಾರ ರಾತ್ರಿ, ಪಿ.ಜಿ.ಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಆಸತ್ರೆಗೆ ಸಾಗಿಸಿದ್ದಾರೆ. ಆತ್ಮಹತ್ಯೆಗೆ ಆರ್ಥಿಕ ಸಂಕಷವೇ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಸಹಜ ಸಾವು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಸಂಜೆ ಪತ್ನಿ ಹಾಗೂ ಮಕ್ಕಳು ಮಾರ್ಕೆಟ್ ಗೆ ತೆರಳಿದ್ದಾಗ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದರು. ಇದೇ ಸಮಯಕ್ಕೆ ಪತ್ನಿ ಮನೆಗೆ ಬಂದಾಗ ನೇಣಿನ ಕುಣಿಕೆಯಲ್ಲಿ ನೇತಾಡುತ್ತಿದ್ದ ಕುಮಾರಸ್ವಾಮಿಯನ್ನು ಸ್ಥಳೀಯರ ನೆರವಿನಿಂದ ಕೆಳಗೆ ಇಳಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆಯೇ ಕುಮಾರಸ್ವಾಮಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಿಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ. ಕುಮಾರಸ್ವಾಮಿ ಆನ್ಲೈನ್ ಗೇಮ್ನಲ್ಲಿ ಸಾಕಷ್ಟು ಹಣ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕ್ಕಿದ್ದೇ ಆತ್ಮಹತ್ಯೆಗೆ ಕಾರಣ ಎಂಬುದು ತನಿಖೆಯಿಂದ ತಿಳಿದು ಬಂದಿದೆ.