ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಅನ್ನು ಸಿ.ಪಿ ಯೋಗೇಶ್ವರ್ ಅವರಿಗೆ ನೀಡುವಂತೆ ಹೈಕಮಾಂಡ್ ಬಳಿ ಮನವಿ ಮಾಡುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು, ಅಶ್ವತ್ಥ್ ನಾರಾಯಣ ಸಿ.ಪಿ.ಯೋಗೇಶ್ವರ್ ಅವರನ್ನು ಭೇಟಿ ಮಾಡಿದ್ದೇವೆ. ಹಾಗೆ ಹೆಚ್.ಡಿ ಕುಮಾರಸ್ವಾಮಿ ಅವರ ಜೊತೆ ಕೂಡ ಚರ್ಚೆ ಮಾಡಿದ್ದೇವೆ. ಸಿ.ಪಿ ಯೋಗೇಶ್ವರ್ ಅವರಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ ಕೇಳುತ್ತೇವೆ. ಯಾವಾಗ ದೆಹಲಿಗೆ ಹೋಗುತ್ತೇವೆ ಎಂದು ಶೀಘ್ರದಲ್ಲೇ ತಿಳಿಸುತ್ತೇವೆ ಎಂದ ಹೇಳಿದರು.