ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಮಹಿಳೆಯರ 50 ಕೆ.ಜಿ ಪ್ರಿಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಗೆದ್ದು ಫೈನಲ್ ಪ್ರವೇಶಿಸಿದ್ದಾರೆ ಕ್ಯೂಬಾದ ಯುಸ್ನೈಲೆಸ್ ಗುಜ್ಮನ್ ಎದುರು 5-0 ಅಂತರದಿಂದ ಗೆದ್ದು ಫೈನಲ್ಗೆ ಪ್ರವೇಶ ಮಾಡಿದ್ದಾರೆ. ಇದರೊಂದಿಗೆ ಪ್ಯಾರೀಸ್ ಒಲಿಂಪಿಕ್ಸ್ನಲ್ಲಿ ಫೈನಲ್ ಪ್ರವೇಶಿಸಿದ ಮೊದಲ ಮಹಿಳಾ ಕ್ರೀಡಾಪಟು ಎನ್ನುವ ಹೆಗ್ಗಳಿಕೆ ಪಾತ್ರರಾಗಿದ್ದು, ಭಾರತಕ್ಕೆ ಕುಸ್ತಿ ವಿಭಾಗದಲ್ಲಿ ಒಂದು ಪದಕ ಖಾತ್ರಿಯಾದಂತಾಗಿದೆ. ಕಳೆದೆರಡು ಒಲಿಂಪಿಕ್ಸ್ನಲ್ಲಿ ಕ್ವಾರ್ಟರ್ ಫೈನಲ್ನಲ್ಲೇ ಮುಗ್ಗರಿಸಿದ್ದ ವಿನೇಶ್ ಫೋಗಟ್ ಈ ಬಾರಿ ಪ್ಯಾರೀಸ್ ಒಲಿಂಪಿಕ್ಸ್ನಲ್ಲಿ ಪದಕ ಖಚಿತಪಡಿಸಿಕೊಂಡಿದ್ದಾರೆ.
ಪ್ರಿಕ್ವಾರ್ಟರ್ ಫೈನಲ್ನಲ್ಲಿ ಹಾಲಿ ಚಾಂಪಿಯನ್ ಹಾಗೂ ವಿಶ್ವ ನಂ.1 ಕುಸ್ತಿಪಟುವಾಗಿದ್ದ ಜಪಾನಿನ ಯ್ಯೂ ಸುಸುಕಿ ವಿರುದ್ದ 3-2 ಅಂತರದಲ್ಲಿ ರೋಚಕ ಗೆಲುವು ಸಾಧಿಸಿದ್ದ ಫೋಗಟ್, ಕ್ವಾರ್ಟರ್ ಫೈನಲ್ನಲ್ಲಿ ಉಕ್ರೇನ್ನ ಮೂರು ಬಾರಿ ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಒಕ್ಸಾನಾ ಲಿವೀಚ್ ಎದುರು 7-5 ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಸೆಮೀಸ್ಗೆ ಲಗ್ಗೆಯಿಟ್ಟಿದ್ದರು. ಆಗಸ್ಟ್ 06 ರಾತ್ರಿ ನಡೆದ ಮಹಿಳೆಯರ 50 ಕೆಜಿ ಕುಸ್ತಿ ಸೆಮಿಫೈನಲ್ ಪಂದ್ಯದಲ್ಲಿ ಯುಸ್ನಿಲಿಸ್ ಗುಜ್ಮಾನ್ ಅವರನ್ನು 5-0 ಅಂತರದಿಂದ ಮಣಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.