ಲೈಂಗಿಕ ದೌರ್ಜನ್ಯ ಕಿರುಕುಳ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ವಿಡಿಯೋದಲ್ಲಿದ್ದ ಕೆಲ ಮಹಿಳೆಯರನ್ನು ಸಂಪರ್ಕಿಸಿ ದೂರು ನೀಡುವಂತೆ ಹೇಳಿದ್ದರು.. ಈ ಪೈಕಿ ಮಹಿಳೆಯೊಬ್ಬರು ಎಸ್ಐಟಿ ಅಧಿಕಾರಿಗಳ ಬಳಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಅಧಾರಿಸಿ ಅಧಿಕಾರಿಗಳು ಲೈಂಗಿಕ ದೌರ್ಜನ್ಯ ಆರೋಪದಡಿ ದಾಖಲಾಗಿದ್ದ ಎಫ್ಐಆರ್ಗೆ ಹೊಸದಾಗಿ ಐಪಿಸಿ ಸೆಕ್ಷನ್ 376 ಅನ್ನು ಸೇರ್ಪಡೆಗೊಳಿಸುವ ಮೂಲಕ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ಹಲವು ಆಮಿಷವೊಡ್ಡಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ನ್ಯಾಯಾಧೀಶರ ಮುಂದೆ ಹೇಳಿದ್ದಾರೆ. ಸಿಆರ್ಪಿಸಿ 164 ಅಡಿಯಲ್ಲಿ ಹೇಳಿಕೆ ದಾಖಲಿಸಲಾಗಿದೆ.