ಬೆಂಗಳೂರಿನ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳ ನೆರವಿಗೆ ಪ್ರಧಾನಿ ನರೇಂದ್ರ ಮೋದಿ ಧಾವಿಸಿದ್ದು, ತಲಾ 2 ಲಕ್ಷ ರುಪಾಯಿ ಪರಿಹಾರ ಘೋಷಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಾಲಯ ಸಂದೇಶ ಪ್ರಕಟಿಸಿದೆ.
ಮೃತ 8 ಜನರ ಕುಟುಂಬಸ್ಥರಿಗೆ ತಲಾ 2 ಲಕ್ಷ ರುಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದ್ದು, ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗುತ್ತದೆ. ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮೃತ ಕಾರ್ಮಿಕರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿ ಎಂದಿದ್ದಾರೆ. ಜತೆಗೆ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.