ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 15 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸ್ ಇನ್ಸ್ಪೆಕ್ಟರ್ ಅರುಣ್ ಕುಮಾರ್ ಜಿ.ವಿ ಅವರು ಲಂಚ ಸ್ವೀಕರಿಸುವ ವೇಳೆಯೇ ಲೋಕಾಯುಕ್ತರಿಗೆ ತಗ್ಲಾಕೊಂಡಿದ್ದಾರೆ.
ಅರುಣ್ ಕುಮಾರ್ ಜಿ.ವಿ ಅವರು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್ ಫೋರ್ಸ್ನ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಲೋಕಾಯುಕ್ತ ಎಸ್ ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಅರುಣ್ ಕುಮಾರ್ ಬಲೆಗೆ ಬಿದ್ದಿದ್ದಾರೆ.