ಅಧಿಕಾರ ಹಂಚಿಕೆಯ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಯಿಂದ ಕಾಂಗ್ರೆಸ್ ಹೈಕಮಾಂಡ್ ಅಲರ್ಟ್ ಆಗಿದೆ. ಅಂತೆಯೇ ಇಂದು ಅಥವಾ ನಾಳೆ ರಾಜ್ಯಕ್ಕೆ ಕೆ.ಸಿ.ವೇಣುಗೋಪಾಲ್ ಭೇಟಿ ನೀಡಲು ಸಿದ್ದರಾಗಿದ್ದಾರೆ.
ವೇಣುಗೋಪಾಲ್ ಭೇಟಿ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಕೆಲಸಗಳು ಹೆಚ್ಚಾಗುತ್ತಲೇ ಇವೆ. ಡಿ.ಕೆ.ಶಿವಕುಮಾರ್ ಹೇಳಿಕೆ ವಿರುದ್ಧ ವೇಣುಗೋಪಾಲ್ಗೆ ದೂರು ನೀಡುವ ಸಾಧ್ಯತೆ ಕೂಡ ಇದೆ. ಅಧಿಕಾರ ಹಂಚಿಕೆ ಹೇಳಿಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ನಲ್ಲಿ ಗಲಾಟೆ-ಗದ್ದಲ ಶುರುವಾಗಿದೆ. ಅಧಿಕಾರ ಹಂಚಿಕೆ ಮಾತುಕತೆ ಆಗಿದೆ. ಕಾಲ ಬಂದಾಗ ಉತ್ತರ ನೀಡುತ್ತೇನೆ ಎಂದು ಶಿವಕುಮಾರ್ ಪದೇ ಪದೆ ಹೇಳ್ತಿದ್ದಾರೆ. ವಿಧಾನಸಭೆ ಕಲಾಪದಲ್ಲೂ ಡಿಕೆಶಿ ಈ ಬಗ್ಗೆ ಮಾತನಾಡಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಅವರು ಅಧಿಕಾರವನ್ನು ಒದ್ದು ಕಿತ್ತುಕೊಳ್ಳಬೇಕು ಎಂದು ವಿಧಾನಸೌಧದಲ್ಲಿ ಹೇಳಿದ್ದರು. ಉಪಮುಖ್ಯಮಂತ್ರಿಗಳ ಈ ಹೇಳಿಕೆಯಿಂದ ಸಿಎಂ ಸಿದ್ದರಾಮಯ್ಯಗೆ ಮುಜುಗರ ಆಗ್ತಿದೆ. ಹೀಗಾಗಿ ಸಿಎಂ ಆಪ್ತ ಬಳಗ ದೂರು ನೀಡುವ ಸಾಧ್ಯತೆ ಇದೆ. ಆ ಮೂಲಕ ಶಿವಕುಮಾರ್ ಅವರ ಬಹಿರಂಗ ಹೇಳಿಕೆಗೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಬೆಂಬಲಿಗರು ಮುಂದಾಗಿದ್ದಾರೆ ಎನ್ನಲಾಗಿದೆ.v