ಮುಂಡಗೋಡು ; ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರೇವಣ್ಣ ದುಬೈಗೆ ತೆರಳಿರುವ ಬಗ್ಗೆ ಮಾತನಾಡಿದ ಅವರು, ಯಾರಾದರೂ ಅಂತರರಾಷ್ಟ್ರೀಯ ಪ್ರಯಾಣ ಮಾಡುವಾಗ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ ಎಂದರು. ಯಾವ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ ಬರಲೇಬೇಕು. ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ರದ್ದು ಮಾಡಲು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂದರು.