- ಹೆಚ್.ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ದೂರು
- ಪ್ರಜ್ವಲ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಜೆಡಿಎಸ್ ನಿಯೋಗ ರಾಜ್ಯಪಾಲರಿಗೆ ಮನವಿ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ದೂರು ನೀಡಿದೆ. ಈ ಪ್ರಕರಣದಲ್ಲಿ ಪಾರದರ್ಶಕ ತನಿಖೆ ಆಗಬೇಕು. ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪೆನ್ಡ್ರೈವ್ ಪ್ರಕರಣ ಸಂಬಂಧ ಕಳೆದ ಒಂದು ವಾರದಿಂದ ಆದ ಬೆಳವಣಿಗೆಗಳ ಬಗ್ಗೆ ಹೆಚ್ಡಿ ಕುಮಾರಸ್ವಾಮಿ ರಾಜ್ಯಪಾಲರಿಗೆ ವಿವರಣೆ ನೀಡಿದರು. ಅಲ್ಲದೇ ಪ್ರಜ್ವಲ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಜೆಡಿಎಸ್ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ.
ವಿಡಿಯೋ ಬಿಡುಗಡೆ ಮಾಡಿದ ಪ್ರಮುಖ ಆರೋಪಿ ಬೆಂಗಳೂರಿನಲ್ಲಿದ್ದು, ಅವನಿಗೆ ಸರ್ಕಾರದಿಂದಲೇ ರಾಜ ಮರ್ಯಾದೆ ಸಿಗುತ್ತಿದೆ. ಇದರ ಹಿಂದೆ ಸರ್ಕಾರದ ಪ್ರಭಾವಿ ನಾಯಕರ ಕೈವಾಡ ಇದೆ. ಈ ಪ್ರಕರಣದ ಹಿಂದೆ ಕೈವಾಡ ಇರೋ ಆಡಿಯೋ ಮಾಧ್ಯಮಗಳಲ್ಲಿ ಬಂದಿದೆ. ಹೀಗಾಗಿ ಎಸ್ಐಟಿ ಇಂದ ನಿಷ್ಪಕ್ಷಪಾತವಾಗಿ ತನಿಖೆ ಆಗ್ತಿಲ್ಲ ಎಂದು ರಾಜ್ಯಪಾಲರ ಮುಂದೆ ಹೆಚ್ಡಿ ಕುಮಾರಸ್ವಾಮಿ ದೂರಿದ್ದಾರೆ.