ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ನ್ಯಾಯ ಕೊಡಿಸುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬೇಕಿಲ್ಲ. ಅವರಿಗೆ ಕೇವಲ ಪ್ರಚಾರ ಚುನಾವಣೆ ವಿಷಯವನ್ನಾಗಿಸಿ ಗೆಲುವು ಸಾಧಿಸುವುದು ಅಷ್ಟೇ ಬೇಕಿರುವುದು ಎಂದು ವಾಗ್ದಾಳಿ ನಡೆಸಿದರು.
ಎಸ್ಐಟಿ ಎಂಬುದು ಈಗ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಂ ಮತ್ತು ಡಿಕೆ ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಂ ಆಗಿದೆ. ನಿಜವಾಗಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವ ಉದ್ದೇಶ ಅವರದ್ದಾಗಿದ್ದರೆ ವಿಡಿಯೋ ಹರಿಬಿಟ್ಟವರನ್ನು ಯಾಕೆ ಇನ್ನೂ ಬಂಧಿಸಿಲ್ಲ..? ಆ ವಿಚಾರವಾಗಿ ದೂರು ನೀಡಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದರು.
ಆಶ್ಲೀಲ ವಿಡಿಯೋ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರ ಒಳಸಂಚಿದೆ. ಇಂಥ ವ್ಯಕ್ತಿಯನ್ನು ಸಂಪುಟದಲ್ಲಿ ಇಟ್ಟುಕೊಂಡು ತನಿಖೆ ಮಾಡಿದರೆ ಸೂಕ್ತ ರೀತಿಯಲ್ಲಿ ತನಿಖೆ ಸಾಗದು. ಹೀಗಾಗಿ ಸಂಪುಟದಿಂದ ಮೊದಲು ಅವರನ್ನು ವಜಾಗೊಳಿಸಿ ತನಿಖೆ ಮುಂದುವರಿಸಲಿ. ಈ ಪ್ರಕರಣವನ್ನು ಸುಲಭವಾಗಿ ನಾನು ಬಿಡಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಮೊದಲು ಡಿಕೆಶಿಯನ್ನು ಕೈ ಬಿಡಲಿ ಎಂದು ಆಗ್ರಹಿಸಿದರು.