ಅಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣದಲ್ಲಿ ಸಿಲುಕಿದ್ದು, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ವಿದೇಶಾಂಗ ಸಚಿವಾಲಯ ಶಾಕ್ ನೀಡಿದೆ. ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದುಗೊಳಿಸುವಂಹವತೆ ಎಸ್ಐಟಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದೀಗ ವಿದೇಶಾಂಗ ಸಚಿವಾಲಯವು, ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.