- ಮಾಜಿ ಶಾಸಕ ಪ್ರೀತಂಗೌಡ ಆಪ್ತ ಲಿಖಿತ್ ಮತ್ತು ಕಚೇರಿ ಸಿಬ್ಬಂದಿ ಚೇತನ್ ಎಸ್ಐಟಿ ವಶಕ್ಕೆ
- ನವೀನ್ಗೌಡ ಮತ್ತು ಪುಟ್ಟರಾಜು ಎಂಬುವರಿಗಾಗಿ ಅಧಿಕಾರಿಗಳ ಹುಡುಕಾಟ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದ ದೇಶದೆಲ್ಲೆಡೆ ಭಾರೀ ಸದ್ದು ಮಾಡ್ತಿದೆ. ಎಸ್ಐಟಿ ಅಧಿಕಾರಿಗಳು ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಮಾಜಿ ಶಾಸಕ ಪ್ರೀತಂಗೌಡ ಆಪ್ತ ಲಿಖಿತ್ ಮತ್ತು ಕಚೇರಿ ಸಿಬ್ಬಂದಿ ಚೇತನ್ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣ ಸಂಬಂಧ ನವೀನ್ಗೌಡ ಮತ್ತು ಪುಟ್ಟರಾಜು ಎಂಬುವರಿಗಾಗಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ.
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿದ್ದಂತೆ ಏಪ್ರಿಲ್ 23 ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ರಚಿಸಿತ್ತು. ಬಳಿಕ ಪ್ರಕರಣ ಎಸ್ಐಟಿಗೆ ವರ್ಗಾವಣೆಯಾಯಿತು. ನಂತರ ಎಸ್ಐಟಿ ಹಲವು ತಂಡಗಳನನು ರಚಿಸಿಕೊಂಡು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದೆ.