- ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪಿ ಬಂಧನ
- ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ ಆರೋಪಿ
- ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್ 67,67 (ಎ) ಕಲಂ ಅಡಿಯಲ್ಲಿ ಪ್ರಕರಣ ದಾಖಲು
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಜ್ವಲ್ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪಿಯನ್ನು ಕುದುರೆಮುಖ ಪೊಲೀಸರು ಬಂಧಿಸಿದ್ದಾರೆ. ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಪ್ರಜ್ವಲ್, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಆಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದನು. ಆರೋಪಿ ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್ 67,67 (ಎ) ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪ್ರಜ್ವಲ್ ಟ್ರೋಲ್ ಪೇಜ್ ಆಡ್ಮಿನ್ ಆಗಿದ್ದಾನೆ.
ಪ್ರಜ್ವಲ್ ರೇವನ್ಣ ಅವರದ್ದು ಎನ್ನಲಾದ ಸಾವಿರಾರು ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಸರ್ಕಾರ ಈ ಪ್ರಕರಣವನ್ನು ಎಸ್ಐಟಿಗೆ ನೀಡಿದೆ. ಈ ಪ್ರಕರಣದ ತನಿಳೆ ನಡೆಯುತ್ತಿರುವಾಗಲೇ ಪ್ರಜ್ವಲ್ ಅವರಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೋಗಳು ಹರಿದಾಡುತ್ತಿವೆ. ವಿಡಿಯೋದಲ್ಲಿ ಹಾಸನ ಸೇರಿದಂತೆ ಹಲವು ಕಡೆಯ ಮಹಿಳೆಯರು ಇದ್ದಾರೆ ಎನ್ನಲಾಗಿದ್ದು, ಅವರ ಮುಖವನನು ಬ್ಲರ್ ಮಾಡಲಾಗಿಲ್ಲ. ಹೀಗಾಗಿ ಕೇಸ್ ಮತ್ತಷ್ಟು ಜಟಿಲವಾಗಿದೆ.