- ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅರೆಸ್ಟ್
- 34 ದಿನಗಳ ಬಳಿಕ ಬೆಂಗಳೂರಿಗೆ ಬಂದ ಪ್ರಜ್ವಲ್ ರೇವಣ್ಣ
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬರೋಬ್ಬರಿ 34 ದಿನಗಳ ಬಳಿಕ ಬೆಂಗಳೂರಿಗೆ ಮರಳಿದ್ದು ಅರೆಸ್ಟ್ ಆಗಿದ್ದಾರೆ.
ಲೋಕಸಭಾ ಚುನಾವಣೆಯ ಮತದಾನದ ನಂತರ ದೇಶದಿಂದ ಪರಾರಿಯಾಗಿದ್ದ ಪ್ರಜ್ವಲ್ ಗುರುವಾರ 12.50 ಗಂಟೆಗೆ ಸುಮಾರು ಬೆಂಗಳೂರಿಗೆ ಬಂದಿಳಿದರು. ನಿಲ್ದಾಣದಲ್ಲಿ ಮೊಕ್ಕಾಂ ಹೂಡಿದ್ದ ಎಸ್ಐಟಿ ಅಧಿಕಾರಿಗಳು, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ಹಾಗೂ ವಲಸೆ ಅಧಿಕಾರಿಗಳು ಸಹಾಯದಿಂದ ಪ್ರಜ್ವಲ್ನನ್ನು ಬಂಧಿಸಿದರು.
ಹೊಳೆನರಸೀಪುರ ಟೌನ್ ಹಾಗೂ ಸಿಐಡಿ ಠಾಣೆಗಳಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಪ್ರಜ್ವಲ್ ಬಂಧನ ಭೀತಿಯಲ್ಲಿ ತಲೆಮರೆಸಿಕೊಂಡಿದ್ದ. ಇವರ ಬಂಧನಕ್ಕೆ ಬ್ಲೂ ಕಾರ್ನರ್ ನೋಟೀಸ್ ಹಾಗೂ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿತ್ತು. ಪ್ರಕರಣ ಸಂಬಂಧ ಅಜ್ಞಾತ ಸ್ಥಳದಿಂದ ಇತ್ತೀಚೆಗೆ ವಿಡಿಯೋ ಬಿಡುಗಡೆ ಮಾಡಿದ್ದ ಪ್ರಜ್ವಲ್ ಮೇ 31 ರಂದು ಶುಕ್ರವಾರ ಎಸ್ಐಟಿ ಅಧಿಕಾರಿಗಳಿಂದ ಎದುರು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ರು