ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಲೈಂಗಿಕ ದೌರ್ಜನ್ಯ ಪೆನ್ ಡ್ರೈವ್ ಸಿಕ್ಕಿರುವ ಸಂಬಂಧ ರಾಜ್ಯ ಸರ್ಕಾರ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ.
ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಎಸ್ಐಟಿ ತಂಡ ರಚಿಸಲಾಗಿದೆ. ನಾವು ಅವರ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಗೃಹ ಸಚಿವರು ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿರುವ ಬಗ್ಗೆ ಮಾಹಿತಿ ಇದ್ದು ಅವರಿಗೆ ನೋಟೀಸ್ ನೀಡಿ ಕರೆಸಿ ತನಿಖೆ ಮಾಡುವ ಬಗ್ಗೆ ಹಿರಿಯ ಪೊಲೀಸ್ ತನಿಖಾಧಿಕಾರಿಗಳೆ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.