ಕುಂಭಮೇಳ ಭಾರತದ ಅತ್ಯಂತ ಪ್ರಮುಖ ಮತ್ತು ಪವಿತ್ರ ಧಾರ್ಮಿಕ ಸಮಾರಂಭಗಳಲ್ಲಿ ಒಂದಾಗಿದೆ. ಇದು ಪ್ರತಿ 12 ವರ್ಷಗಳಿಗೊಮ್ಮೆ ನಡೆಯುತ್ತದೆ ಮತ್ತು ಲಕ್ಷಾಂತರ ಭಕ್ತರು ಮತ್ತು ಪ್ರವಾಸಿಗರು ಭಾಗವಹಿಸುತ್ತಾರೆ. ಕುಂಭಮೇಳದ ಸಮಯದಲ್ಲಿ, ವಿಮಾನ ಟಿಕೆಟ್ಗಳ ಬೇಡಿಕೆ ಗಮನಾರ್ಹವಾಗಿ ಹೆಚ್ಚಾಗುತ್ತದೆ, ಇದು ಸಾಮಾನ್ಯವಾಗಿ ಟಿಕೆಟ್ಗಳ ದರವನ್ನು ಹೆಚ್ಚಿಸುತ್ತದೆ. ಆದರೆ ಇದೀಗ ವಿಮಾನ ಟಿಕೆಟ್ ದರ ಅರ್ಧದಷ್ಟು ಇಳಿಕೆಯಾಗಿದೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಕೋಟ್ಯಂತರ ಭಕ್ತರು ತೆರಳುತ್ತಿದ್ದಾರೆ. ಪ್ರಯಾಗ್ ರಾಜ್ ಗೆ ಸೇವೆ ನೀಡುತ್ತಿರುವ ವಿಮಾನಯಾನ ಸಂಸ್ಥೆಗಳ ಟಿಕೆಟ್ ದರ ಏರಿಕೆ ಬರೆಗೆ ಕೇಂದ್ರ ಸಚಿವ ಪ್ರಲ್ಯಾದ್ ಜೋಶಿ ಬ್ರೇಕ್ ಹಾಕಿದ್ದಾರೆ.
ವಿಮಾನಯಾನ ಕಂಪನಿಗಳ ಟಿಕೆಟ್ ದರ ಭಾರಿ ಏರಿಕೆಯ ಬಗ್ಗೆ ಪ್ರಹ್ಲಾದ್ ಜೋಶಿ ಬುಧವಾರ ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ ಪತ್ರ ಬರೆದು ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇದರ ಬೆನ್ನಲ್ಲೇ ನಾಗರಿಕ ವಿಮಾನಯಾನ ನಿರ್ದೇಶನಾಲಯ ಟಿಕೆಟ್ ದರ ಕಡಿತಗೊಳಿಸಲು ವಿಮಾನಯಾನ ಕಂಪನಿಗಳಿಗೆ ಸೂಚನೆ ನೀಡಿದೆ.
ಟಿಕೆಟ್ ದರ ಮಿತಿಯಲ್ಲಿಸುವಂತೆ ತಿಳಿಸಿದೆ. ಇದರ ಪರಿಣಾಮ ವಿಮಾನಯಾನ ಟಿಕೆಟ್ ದರವನ್ನು 30 ರಿಂದ 50 ರಷ್ಟು ಕಡಿಮೆ ಮಾಡಲಾಗಿದೆ. ದೇಶದ ಮೂಲೆ ಮೂಲೆಗಳಿಂದ ಪ್ರಯಾಗ್ ರಾಜ್ ಗೆ ಅಸಂಖ್ಯಾತ ಜನ ತೆರಳುತ್ತಿದ್ದಾರೆ. ಬೇಡಿಕೆ ಹೆಚ್ಚಾಗಿದ್ದರಿಂದ ವಿಮಾನ ಟಿಕೆಟ್ ದರವನ್ನು ಭಾರಿ ಹೆಚ್ಚಳ ಮಾಡಲಾಗಿತ್ತು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕೇಂದ್ರ ಸಚಿವ ಪ್ರಲಾದ್ ಜೋಶಿ ಮಧ್ಯ ಪ್ರವೇಶಿಸಿದ್ದರು. ಇದರ ಬೆನ್ನಲ್ಲೇ ವಿಮಾನ ಟಿಕೆಟ್ ದರ ಕಡಿಮೆ ಮಾಡಲಾಗಿದೆ.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc