ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ನಿವೇಶನವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್ಗೆ ಹಂಚಿಕೆ ಮಾಡಲಾಗಿದೆ ಎಂದು ವಿಪಕ್ಷಗಳು ಆರೋಪಿಸಿತ್ತಿವೆ. ಖರ್ಗೆ ಕುಟುಂಬಕ್ಕೆ ಭೂಮಿ ಹಂಚಿಕೆ ಮಾಡಿರುವುದನ್ನು ಬಿಜೆಪಿ-ಜೆಡಿಎಸ್ ಅಸ್ತ್ರ ಮಾಡಿಕೊಂಡು ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿವೆ. ಇನ್ನು ಇದೀಗ ಸ್ವತಃ ಸಚಿವ ಪ್ರಿಯಾಂಕ್ ಖರ್ಗೆ ಅವರೆ ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ನಿವೇಶನವನ್ನು ಅಕ್ರಮವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್ಗೆ ಹಂಚಿಕೆ ಮಾಡಲಾಗಿದೆ ಎಂದು ವಿರೋಧ ಪಕ್ಷಗಳಾದ ಬಿಜೆಪಿ-ಜೆಡಿಎಸ್ ಆರೋಪಿಸುತ್ತಿವೆ. ಇನ್ನು ಈ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್ನಲ್ಲಿ ಐದು ಎಕರೆ ಮಂಜೂರು ವಿಚಾರಕ್ಕೆ ಸ್ವತಃ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಇದು ವಾಣಿಜ್ಯ ಅಥವಾ ಕೈಗಾರಿಕಾ ಉದ್ದೇಶಕ್ಕೆ ಪಡೆದಿಲ್ಲ. ಇದು ಸಿಎ ಜಮೀನು. ಎಂಬಿ ಪಾಟೀಲ್ ಅವರು ಇದರ ಬಗ್ಗೆ ಸ್ಪಷ್ಟ ಉತ್ತರ ಕೊಟ್ಟಿದ್ದಾರೆ. ಒಟ್ಟು 193 ಸಂಸ್ಥೆಗಳು ಅರ್ಜಿ ಹಾಕಿದ್ವು, 43 ಸಂಸ್ಥೆಗಳು ಮಾತ್ರ ಆಯ್ಕೆ ಆಗಿವೆ. ಇದರಲ್ಲಿ ಯಾವುದೇ ಪ್ರಭಾವ ಬೀರಿಲ್ಲ. ಬಿಜೆಪಿಯವರಿಗೆ ಕನಿಷ್ಟ ಜ್ಞಾನ ಇಲ್ಲ ಎಂದು ತಿರುಗೇಟು ನೀಡಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಸಿಎ ಸೈಟನ್ನು ಹರಾಜು ಹಾಕಲು ಹಾಗಲ್ಲ, ಅದನ್ನು ಖರಿದಿಯೇ ಮಾಡಬೇಕು. ಬಿಜೆಪಿಯವರು ಎಷ್ಟು ಜನ ಸಿಎ ನಿವೇಶನ ಪಡೆದಿಲ್ಲ ಕೇಳಿ. ಈ ಟ್ರಸ್ಟ್ ಮೂರು ದಶಕದಿಂದ ಚಾಲ್ತಿಯಲ್ಲಿದೆ, ಹಳೆಯ ಟ್ರಸ್ಟ್. ಶಿಕ್ಷಣ, ಸಮಾಜ ಸೇವೆ ಕೆಲಸ ಮಾಡಿಕೊಂಡು ಬರುತ್ತಿರುವ ಟ್ರಸ್ಟ್. ಯುವ ಸಮೂಹಕ್ಕೆ ಕೌಶಲ್ಯಾಭಿವೃದ್ಧಿ ಕೇಂದ್ರ ತೆರೆಯೋದು ತಪ್ಪಾ? ಇದಕ್ಕೆ ಜಮೀನು ಖಾಸಗಿಯವರು ಕೊಡಬೇಕು ಅಥವಾ ಸರ್ಕಾರದಿಂದ ಖರೀದಿ ಮಾಡಬೇಕು. ನಾವು ಸರ್ಕಾರದಿಂದ ಖರೀದಿ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದಿರು.