- ಕುಡಿದ ಮತ್ತಿನಲ್ಲಿ ಕಾರು ಚಾಲನೆ, ಇಬ್ಬರು ಸಾವು
- ಮದ್ಯ ನೀಡಿದ ಪಬ್ ಹಾಗೂ ರೆಸ್ಟೋರೆಂಟ್ ವಿರುದ್ಧ ದೂರು
ಪುಣೆಯಲ್ಲಿ ಅಪ್ರಾಪ್ತನೊಬ್ಬ ಕುಡಿದ ಮತ್ತಿನಲ್ಲಿ ಐಷಾರಾಮಿ ಪೋರ್ಷೆ ಕಾರು ಚಾಲಯಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಬಳಿಕ ಪೊಲೀಸರು ಅವರನ್ನು ಬಂಧಿಸಿ 15 ಗಂಟೆಗಳಲ್ಲೇ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.
ಅಪ್ರಾಪ್ತ ಬಾಲಕರಿಗೆ ಮದ್ಯ ನೀಡಿದ ಆರೋಪದ ಮೇಲೆ ಪಬ್ ಹಾಗೂ ರೆಸ್ಟೋರೆಂಟ್ ವಿರುದ್ಧ ದೂರು ದಾಖಲಾಗಿದ್ದು, ರೆಸ್ಟೋರೆಂಟ್ಗಳಿಗೆ ಬೀಗ ಹಾಕಲಾಗಿದೆ. ಬಾಲಕ ಸ್ನೇಹಿತರೊಂದಿಗೆ ರಾತ್ರಿ 9 .30 ರಿಂದ 10.30 ರ ನಡುವೆ ಮದ್ಯ ಸೇವನೆ ಮಾಡಿದ್ದಾರೆ. ಬಾಲಕನಿಗೆ ಜಾಮೀನು ನೀಡಿದ ಬಳಿಕ 15 ದಿನಗಳ ಕಾಲ ಟ್ರಾಫಿಕ್ ಪೊಲೀಸರೊಂದಿಗೆ ಕೆಲಸ ಮಾಡಬೇಕು. ಅಪಘಾತಕ್ಕೆ ಸಂಬಂಧಿಸಿದಂತೆ 300 ಪುಟಗಳ ಪ್ರಬಂಧ ಬರೆಯಬೇಕು ಎಂದು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ತಂದೆಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.