ಬಹು ಬೇಡಿಕೆಯ ಹಾಗೂ ಬಹುನಿರೀಕ್ಷೆಯ ಪುಷ್ಪ 2 ಚಿತ್ರ ಬಿಡುಗಡೆಯಾಗಿದೆ. ಆದರೆ, ಚಿತ್ರಕ್ಕೆ ಹಲವು ವಿಘ್ನಗಳು ಎದುರಾಗುತ್ತಲೇ ಇದ್ದವು ಇದೀಗ ಬೆಂಗಳೂರು ಸೇರಿದಂತೆ ಹಲವು ಚಿತ್ರಮಂದಿರಗಳ ಕಾರಣಾಂತರಗಳಿಂದ ಬೆಳಗಿನ ಶೋ ರದ್ದುಪಡಿಸಲಾಗಿತ್ತು, ಇದರ ಮಧ್ಯೆ ಹೈದರಾಬಾದ್ನಲ್ಲಿ ಭಾರಿ ಅವಘಡ ಸಂಭವಿಸಿದೆ. ಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಚಿಕ್ಕಡ್ಪಲ್ಲಿಯ ಥಿಯೇಟರ್ನಲ್ಲಿ ಭಾರೀ ಪ್ರಮಾಣದಲ್ಲಿ ಅಭಿಮಾನಿಗಳು ಸೇರಿದ್ದು ಬುಧವಾರ ತಡರಾತ್ರಿ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 12 ವರ್ಷದ ಮಗ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.
ದಿಲ್ಸುಖ್ನಗರ ನಿವಾಸಿಯಾದ ರೇವತಿ, ಶ್ರೀ ತೇಜಾ ಅವರ ಪತಿ ಭಾಸ್ಕರ್ ಮತ್ತು ಕಿರಿಯ ಮಗುವಿನೊಂದಿಗೆ ಆರ್ಟಿಸಿ ಕ್ರಾಸ್ ರೋಡ್ನಲ್ಲಿರುವ ಸಂಧ್ಯಾ ಥಿಯೇಟರ್ಗೆ ಬಂದಿದ್ದರು. ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿರುವ ಮಹಿಳೆಯನ್ನು 39 ವರ್ಷದ ರೇವತಿ ಎಂದು ಗುರುತಿಸಲಾಗಿದೆ. ಅವರ ಒಂಬತ್ತು ವರ್ಷದ ಮಗ ಶ್ರೀ ತೇಜಾನನ್ನು ಆಂಬ್ಯುಲೆನ್ಸ್ನಲ್ಲಿ ಹತ್ತಿರದ ಆಸ್ಪತ್ರೆಗೆ ಕಳುಹಿಸಲಾಗಿದೆ. ಆದರೆ, ತೇಜಾ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ತಡರಾತ್ರಿಯೇ ಅಲ್ಲಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಿನಿಮಾ ನೋಡಲು ಕೆಲ ಸ್ಟಾರ್ಗಳು ಥಿಯೇಟರ್ಗೆ ಆಗಮಿಸಿದ್ದರು. ಈ ವೇಳೆ ಸಿನಿಮಾ ನೋಡಿ ಚಿತ್ರಮಂದಿರದಿಂದ ಜನರು ಹೊರಬರುತ್ತಿದ್ದಾಗ ತಳ್ಳಾಟ ನಡೆದಿದೆ. ಸೆಲೆಬ್ರಿಟಿಗಳನ್ನು ಭೇಟಿಯಾಗುವ ಸಲುವಾಗಿ ಅಭಿಮಾನಿಗಳು ಒಳಗೆ ನುಗ್ಗಿದ್ದಾರೆ. ಆಗ ರೇವತಿ ಕೆಳಕ್ಕೆ ಬಿದ್ದಿದ್ದಾರೆ . ನಂತರ ಪೊಲೀಸರಿಂದ ಲಾಠಿ ಚಾರ್ಜ್ ನಡೆದಿದೆ. ಅಸ್ವಸ್ಥನಾಗಿದ್ದ ಬಾಲಕನನ್ನು ಸ್ಥಳದಲ್ಲಿದ್ದ ಪೊಲೀಸರು ಸಿಪಿಆರ್ ಮೂಲಕ ಪ್ರಜ್ಞೆ ಬರುವಂತೆ ಮಾಡಲು ಪ್ರಯತ್ನಿಸಿದ್ದಾರೆ. ಬಳಿಕ ಅವರನ್ನು ಬೇಗಂಪೇಟೆಯ ಆಸ್ಪತ್ರೆಗೆ ರವಾನಿಸಲಾಗಿದ್ದಾರೆ. ಕಾಲ್ತುಳಿತ ಸಂಭವಿಸಿದಾಗ ಅಲ್ಲು ಅರ್ಜುನ್ ಥಿಯೇಟರ್ ಒಳಗೆ ಚಿತ್ರ ವೀಕ್ಷಿಸುತ್ತಿದ್ದರು ಎಂದು ವರದಿ ತಿಳಿಸಿದೆ.