ಹೈದ್ರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ನಡೆದ ಭೀಕರ ಕಾಲ್ತುಳಿದಲ್ಲಿ ಗಾಯಗೊಂಡಿದ್ದ ಬಾಲಕನ ಮೆದುಳಿಗೆ ಹಾನಿಯಾಗಿದೆ ಎಮದು ವೈದ್ಯರು ತಿಳಿದ್ದಾರೆ. ಪುಷ್ಪ 2 ಚಿತ್ರ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ದಿಲ್ ಸುಖ್ ನಗರದ ರೇವತಿ ಎಂನ ಮಹಿಳೆ ಸಾವನ್ನಪ್ಪಿದ್ದರು.
ಆಕೆಯ ಒಂಬತ್ತು ವರ್ಷದ ಮಗ ಗಂಭೀರವಾಗಿ ಗಾಯಗೊಂಡಿದ್ದಾನೆ. ಕಿಮ್ಸ್ ಆಸ್ಪತ್ರೆಯ ಮಕ್ಕಳ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ.ಚೇತನ್ ಆರ್.ಮುಂಡಾಡ ಮತ್ತು ಡಾ.ವಿಷ್ಣು ತೇಜ್ ಪುಡಿ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಅತ್ಯಾಧುನಿಕ ವೈದ್ಯಕೀಯ ಸೇವೆ ನೀಡಿದ ಹಿನ್ನೆಲೆಯಲ್ಲಿ ಚೇತರಿಸಿಕೊಳ್ಳುತ್ತಾರೆ ಎಂದು ಎಲ್ಲರೂ ಭಾವಿಸಿದ್ದರೂ ಅದು ಕೈಗೂಡಲಿಲ್ಲ. ಘಟನೆ ನಡೆದ ಈ ತಿಂಗಳ 4ರಿಂದ ಬಾಲಕ ಕಣ್ಣು ಕೂಡ ತೆರೆದಿಲ್ಲ. ಇದೀಗ ಮೆದುಳು ಹಾಳಾಗಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ.
ತೆಲಂಗಾಣ ಆರೋಗ್ಯ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಡಾ.ಕ್ರಿಸ್ಟಿನಾ ಝಡ್ ಚೋಂಗು ಹೈದರಾಬಾದ್ ನಗರ ಪೊಲೀಸ್ ಆಯುಕ್ತ ಸಿ.ವಿ.ಆನಂದ್, ಕೇಂದ್ರ ವಲಯ ಡಿಸಿಪಿ ಆಕಾಂಕ್ಷಾ ಯಾದವ್ ಅವರು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಮಂಗಳವಾರ ಸಂಜೆ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದರು. ಶ್ರೀತೇಜ್ ಪಡೆಯುತ್ತಿರುವ ವೈದ್ಯಕೀಯ ಚಿಕಿತ್ಸೆಯ ಬಗ್ಗೆ ವೈದ್ಯರಲ್ಲಿ ಕೇಳಲಾಯಿತು.
ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ ಬಂಧನವಾಗಿದ್ದು ಗೊತ್ತೇ ಇದೆ. ಅವರ ಜೊತೆಗೆ ಚಿತ್ರ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 118 (1) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೆಲವು ದಿನಗಳ ಹಿಂದೆ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು. ಆ ನಂತರ ಹೈಕೋರ್ಟ್ ನಾಲ್ಕು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಬಿಡುಗಡೆ ಮಾಡಿತ್ತು.