ಝಣ-ಝಣಾ ಕಾಂಚಾಣದಲ್ಲಿ , ಕಾಂಗ್ರೆಸ್ ಸರ್ಕಾರದಲ್ಲಿ, ರಸ್ತೆ ಗುಂಡಿ ಮುಚ್ಚುವ ಹಣವೂ ಮಾಯ, ನಾಳೆ ರಸ್ತೆಯೂ ಮಾಯ, ಎಲ್ಲಾ ಮಾಯಾ, ನಾಳೆ ನಾವೂ ಮಾಯ.
ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಸಚಿವ ಶ್ರೀ ಡಿ.ಕೆ ಶಿವಕುಮಾರ್ ಅವರೇ, ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಬಿಬಿಎಂಪಿ ವ್ಯಾಪ್ತಿಯ ಪ್ರತಿ ವಾರ್ಡ್ಗೆ ತಲಾ 15 ಲಕ್ಷ ರೂಪಾಯಿ ಬಿಡುಗಡೆ ಮಾಡಿದ್ದರಲ್ಲ ಆ ಹಣವೆಲ್ಲಾ ಏನಾಯ್ತು ಎಂದು ಪ್ರತಿಪಕ್ಷದ ನಾಯಕ ಆರ್ ಅಶೋಕ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ತಿರುಪತಿ ಹೋಟೆಲ್ಗಳಿಗೆ ಬಾಂಬ್ ಬೆದರಿಕೆ !
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು, ಬೆಂಗಳೂರಿನ ಉದ್ದಗಲಕ್ಕೂ ಬಾಯ್ದೆರೆದಿರುವ ಯಮಸ್ವರೂಪಿ ರಸ್ತೆ ಗುಂಡಿಗಳನ್ನು ನೋಡಿದರೆ ಬಹುಶಃ ಆ ದುಡ್ಡೆಲ್ಲವೂ ತಮ್ಮ ಕಮಿಷನ್ ಪಾಲಾದಂತಿದೆ ಅಥವಾ ಈಗ ಚನ್ನಪಟ್ಟಣ ಚುನಾವಣೆ ಖರ್ಚಿಗೆ ಆ ಹಣ ಸಾಗಿಸಿದ್ದೀರೋ? ಬ್ಯಾಂಡ್ ಬೆಂಗಳೂರು ಕಟ್ಟುವುದು ದೂರದ ಮಾತು ಸ್ವಾಮಿ, ಮೊದಲು ರಸ್ತೆ ಗುಂಡಿ ಮುಚ್ಚಿಸಿ ಜನರ ಪ್ರಾಣ ಉಳಿಸಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಆಗ್ರಹಿಸಿದ್ದಾರೆ.