ರಾಯಚೂರು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಅವರನ್ನು ನಿಯೋಜಿಸಲಾಗಿದೆ. ರಾಜ್ಯ ಸರ್ಕಾರದ ಹಣಕಾಸು ವಿಭಾಗದ ಜಂಟಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಇವರನ್ನ ತಕ್ಷಣಕ್ಕೆ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶಿಸಲಾಗಿದೆ. ಇನ್ನು ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಚಂದ್ರಶೇಖರ್ ಎಲ್. ನಾಯಕ ಅವರನ್ನು ಆದಾಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಹುದ್ದೆಗೆ ನಿಯೋಜಿಸಲಾಗಿದೆ.