ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿದೆ.ಮುಂಜಾನೆ ಮಾತ್ರ ಚಳಿಯ ಕಚಗುಳಿ ಅನುಭವ ನೀಡುತ್ತೆ, ಆನಂತರ ಬಿಸಿಲಿನ ಬೇಗೆ ಕಾಣಿಸುತ್ತಿದೆ. ಆದರೆ ಹವಾಮಾನ ಇಲಾಖೆಯು ಡಿಸೆಂಬರ್ 27 ರಿಂದ ಎರಡು ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ತುಮಕೂರು, ಶಿವಮೊಗ್ಗ, ರಾಮನಗರ,ಮೈಸೂರು, ಕೋಲಾರ, ಕೊಡಗು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ,ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.