- ಸಿಲಿಕಾನ್ ಸಿಟಿಯ ಹಲವೆಡೆ ಮಳೆ
- ಇಂದಿನಿಂದ ಐದು ದಿನ ನಗರದಲ್ಲಿ ಮಳೆ
ಬೆಂಗಳೂರು : ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆರಾಯ ಅಬ್ಬರಿಸುತ್ತಿದ್ದು, ಸಿಲಿಕಾನ್ ಸಿಟಿಯ ಹಲವೆಡೆ ಮಳೆಯಾಗಿದೆ. ಮಲ್ಲೇಶ್ವರಂ, ಯಶವಂತಪುರ, ಕಾರ್ಪೋರೇಷನ್, ಟೌನ್ಹಾಲ್, ಕೆ.ಆರ್ ಮಾರ್ಕೆಟ್ ಸೇರಿದಂತೆ ನಗರದ ಹಲವೆಡೆ ಮಳೆಯಾಗುತ್ತಿದೆ. ನಗರದೆಲ್ಲೆಡೆ ಮೋಡಕವಿದ ವಾತಾವರಣವಿದ್ದು, ಇಂದಿನಿಂದ ಐದು ದಿನ ನಗರದಲ್ಲಿ ಮಳೆ ಆಗಲಿದೆ ಎಂದಯ ಹವಾಮಾನ ಇಲಾಖೆ ತಜ್ಞ ಸಿಎಸ್ ಪಾಟೀಲ್ ಹೇಳಿದ್ದಾರೆ.