- ಕರ್ನಾಟಕದಲ್ಲಿ ಮುಂಗಾರು ಚುರುಕು
- ಬೆಂಗಳೂರಿನಲ್ಲಿ ವಾತಾವರಣ ಕೂಲ್ ಕೂಲ್
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿದ್ದು, ಸಿಲಿಕಾನ್ ಸಿಟಿಯಲ್ಲಿ ಮುಂಜಾನೆಯಿಂದಲೂ ಮೋಡ ಕವಿದ ವಾತಾವರಣ ಜೊತೆಗೆ ತುಂತುರು ಮಳೆಯಾಗಿದೆ. ಬೆಂಗಳೂರಿನಲ್ಲೂ ವಾತಾವರಣ ಕೂಲ್ ಕೂಲ್ ಆಗಿದೆ.
ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಒಂದೆರಡು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ ಎನ್ನಲಾಗಿದೆ. ಉತ್ತರ ಕರ್ನಾಟಕ ಭಾಗದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆ ಉತ್ತರ ಕನ್ನಡ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಸಿಲಿಕಾನ್ ಸಿಟಿಯಲ್ಲೂ ಮಳೆ ಮುನ್ಸೂಚನೆ ನೀಡಿದೆ. ದಿನವಿಡೀ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಸಂಜೆ ವೇಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.