ಕರ್ನಾಟಕದ 10 ಜಿಲ್ಲೆಗಳಲ್ಲಿ ಮುಂದಿನ 6 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದೇ ವಾತಾವರಣ ಜುಲೈ 9ರಂದು ಸಹ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಕ್ಯಾಸಲ್ರಾಕ್, ಮಂಕಿ, ಕೊಟ್ಟಿಗೆಹಾರ, ಲೋಂಡಾ, ಕುಮಟಾ, ಕದ್ರಾ, ಶಿರಾಲಿ, ಕೊಲ್ಲೂರು, ಗೋಕರ್ಣ, ಸೇಡಂ, ಆಗುಂಬೆಯಲ್ಲಿ ಮಳೆಯಾಗಿದೆ.