ಕರ್ನಾಟಕದ ಕರಾವಳಿ ಹಾಗೂ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.
ಕುಮಟಾ, ಮಂಗಳೂರು, ಶಿರಾಲಿ, ಕಾರವಾರ, ಪಣಂಬೂರು, ಲೋಂಡಾ, ಪೊನ್ನಂಪೇಟೆ, ಶೃಂಗೇರಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಎಚ್ಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.