ರಾಜ್ಯಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಹಲವೆಡೆ ಮಳೆಯಾಗುತ್ತಿದೆ. ಬೆಂಗಳೂರು, ಹಾಸನ, ಕೊಡಗು ಸೇರಿದಂತೆ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.