- ಜೂನ್ 2ರಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ
- ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ರಾಜ್ಯದಲ್ಲಿ ಮುಂಗಾರು ಮೇ 31 ರಂದು ಪ್ರವೇಶಿಸಲಿದ್ದು, ಜೂನ್ 2ರಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ರಾಮನಗರದಲ್ಲಿ ಭಾರೀ ಮಳೆಯಾಗಲಿದ್ದು ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು, ಬೆಳ್ತಂಗಡಿ, ಕೊಟ್ಟಿಗೆಹಾರ, ಪಣಂಬೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 39. 4 ಡಿಗ್ರಿ ಸೆಲ್ಸಿಯಸ್ ಅತ್ಯಂ ಗರಿಷ್ಠ ಉಷ್ಠಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ.