- ಗುಡುಗು, ಮಿಂಚು ಸಮೇತ ಧಾರಾಕಾರವಾಗಿ ಮಳೆ
- ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ 24 ಗಂಟೆಯಲ್ಲಿ ಗುಡುಗು, ಮಿಂಚು ಸಮೇತ ಧಾರಾಕಾರವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಉತ್ತಮವಾಗಿ ಮಳೆ ಬಂದಿದ್ದರಿಂದ ಕೆಲ ಜಲಾಶಯಗಳಿಗೆ ನೀರು ಹರಿದು ಬಂದಿದೆ. ಇದರಿಂದ ಕರ್ನಾಟಕದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಇದರ ಬೆನ್ನಲ್ಲೇ ಮುಂದಿನ 24 ಗಂಟೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸೂಚನೆ ಇದೆ. ಮುಂದಿನ 4 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.