- ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ
- ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ 7 ಜಿಲ್ಲೆಗಳಲ್ಲಿ ಜೂನ್ 24ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಬೀದರ್, ಧಾರವಾಡ, ಹಾವೇರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಾವಣಗೆರೆ, ಪರಶುರಾಂಪುರ, ಹೊನ್ನಾವರ, ಲೋಂಡಾ, ಕೂಡಲಸಂಗಮ, ಚಿಕ್ಕಬಳ್ಳಾಪುರ, ಕುಂದಾಪುರ, ಬೆಳ್ತಂಗಡಿ, ಅಂಕೋಲಾ, ಕೋಟ, ಶಿರಾಲಿ, ಮೂರ್ನಾಡು, ಸಿದ್ದಾಪುರ, ಕಾರ್ಕಳ, ಧರ್ಮಸ್ಥಳ, ಮಾಣಿ, ಮಂಕಿ, ಗೇರುಸೊಪ್ಪ, ಮಹಾಲಿಂಗಪುರ, ಕಮ್ಮರಡಿ, ಗುಬ್ಬಿ, ಆಗುಂಬೆ, ಗೌರಿಬಿದನೂರು, ಭಾಗಮಂಡಲ, ನಾಪೋಕ್ಲು, ಕುಡತಿನಿಯಲ್ಲಿ ಮಳೆಯಾಗಿದೆ.