ರಾಜ್ಯದಲ್ಲಿ ಮಳೆಯ ಅರ್ಭಟ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಜುಲೈ 12 ರವರೆಗೆ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು ಈ ಮೂರು ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜು.10 ಮತ್ತು 11ರಂದು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ ಎಂದು ತಿಳಿಸಿದರು.
ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಜು.12ರವರೆಗೆ ಯೆಲ್ಲೋ ಅಲರ್ಟ್ ಇರಲಿದ್ದು ಬೆಳಗಾವಿ, ಬೀದರ್, ಕಲಬುರಗಿ, ಕೊಡಗು, ಹಾಸನ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇಂದು ಉತ್ತರ ಒಳನಾಡಿನ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೆೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರ ಜಿಲ್ಲೆಗಳಲ್ಲಿ ಹಲವೆಡೆ ಗಾಳಿ ಸಹಿತ ಸಾಧಾರಣ ಮಳೆ/ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕರ್ನಾಟಕದ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.