ಫೆಂಗಲ್ ಚಂಡಮಾರುತದ ಅಬ್ಬರ ತಗ್ಗಿದರೂ ಅದರ ಎಫೆಕ್ಟ್ ಇನ್ನೂ ಕಡಿಮೆಯಾಗುತ್ತಿಲ್ಲ. ರಾಜ್ಯದಲ್ಲಿ ಈಗಲೂ ಕೂಡ ಮಳೆ ಮುಂದುವರೆದಿದೆ. ಈ ನಡುವೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಮಾಹಿತಿ ನೀಡಿದೆ.
ಚಳಿಗಾಲದ ನಡುವೆಯೂ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಡಿಸೆಂಬರ್ 21ರ ವರೆಗೂ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಈ ಬಗ್ಗೆ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, ಬಳಿಕ ಸಂಜೆವರೆಗೂ ಬಿಸಿಲಿನ ವಾತಾವರಣವೇ ಮುಂದುವರೆದಿದೆ. ಇನ್ನು ರಾತ್ರಿ ವೇಳೆಗೆ ಮಂಜಿನ ಜೊತೆ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಮುಂದಿನ ಮೂರು ದಿನಗಳವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆ ಬರುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.