ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಆಗಸ್ಟ್ 26ರ ಬಳಿಕ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.