ರಾಮನಗರ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ಗಳ ಹಾವಳಿ ಹೆಚ್ಚಾಗುತ್ತಿದ್ದು, ಇದರಿಂದ ಬಡವರು ಪ್ರಾಣ ಬಿಡುತ್ತಿದ್ದಾರೆ. ಎಷ್ಟೋ ಜನರು ಸಾಲ ಮಾಡಿ ಮರುಪಾವತಿ ಮಾಡಲಾಗದೇ ಸಾವಿನ ದಾರಿ ಹಿಡಿಯುತ್ತಿದ್ದಾರೆ. ಇದೀಗ ಈ ಪೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಜೀವ ಹೋಗಿದೆ.
ಮೈಕ್ರೋ ಪೈನಾನ್ಸ್ ಕಿರುಕುಳ
ಮೈಕ್ರೋ ಪೈನಾನ್ಸ್ ಕಿರುಕುಳಕ್ಕೆ ಮಹಿಳೆಯೊರ್ವಳು ಬಲಿಯಾಗಿರುವ ಘಟನೆ ರಾಮನಗರ ತಾಲೂಕಿನ ತಿಮ್ಮಯ್ಯನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಯಶೋದಮ್ಮ (60) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈ ಮಹಿಳೆ 8 ಕ್ಕೂ ಹೆಚ್ಚು ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದಿದ್ದರು. ಸಾಲಗಾರರ ಕಾಟಕ್ಕೆ ನೇಣಿಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಮಹಿಳೆಯು ಖಾಸಗಿ ಫೈನಾನ್ಸ್ ಕಂಪನಿಗಳಲ್ಲಿ 5 ಲಕ್ಷ ಸಾಲ ಪಡೆದಿದ್ದರು. ಇತ್ತೀಚೆಗಷ್ಟೇ ಫೈನಾನ್ಸ್ ಸಿಬ್ಬಂದಿ ಸಾಲಾ ಮರುಪಾವತಿ ಮಾಡುವಂತೆ ಹಲವು ಬಾರಿ ಮನೆ ಬಳಿ ಬಂದು ಗಲಾಟೆ ಮಾಡಿದ್ದರು. ಇದರಿಂದ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಬಗ್ಗೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc