- ಸಿ.ಪಿ ಯೋಗೇಶ್ವರ್ ವಿರುದ್ಧ ಪುತ್ರಿ ಗಂಭೀರ ಆರೋಪ
- ವಿಡಿಯೋ ಮೂಲಕ ತಮ್ಮ ಅಳಲು ತೋಡಿಕೊಂಡ ನಿಶಾ
ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಪಿ ಯೋಗೇಶ್ವರ್ ಪುತ್ರಿ ನಿಶಾ ಅವರು ತಮ್ಮ ತಂದೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಹಲವು ವಿಡಿಯೋಗಳ ಮೂಲಕ ಸಾರ್ವಜನಿಕವಾಗಿ ತಮ್ಮ ಆಳಲು ತೋಡಿಕೊಂಡಿದ್ದಾರೆ. ನನ್ನ ತಂದೆ ತಮ್ಮ ಮೇಲೆ ಹಲ್ಲೆ ಮಾಡುತ್ತಾರೆ. ಹಾಗೆಯೇ ತಮ್ಮ ಕುಟುಂಬವನ್ನು ಕಡೆಗಣಿಸುತ್ತಿದ್ದಾರೆ ಎಂದು ನಿಶಾ ಆರೋಪಿಸಿದ್ದಾರೆ.
ನಿಶಾ ತಮ್ಮ ತಂದೆಯಿಂದ ದೂರವಾಗಿದ್ದು, ಕಾಂಗ್ರೆಸ್ ಸೇರ್ಪಡೆಗೆ ಯತ್ನಿಸುತ್ತಿದ್ದಾರೆ ಎಂದು ಈ ಹಿಂದೆಯೇ ಸುದ್ದಿಯಾಗಿತ್ತು. ಆದರೆ ತಂದೆಯೇ ತಮ್ಮನ್ನು ದೂರವಿಟ್ಟು ಕಡೆಗಣಿಸುತ್ತಿದ್ದಾರೆ ಎಂದು ನಿಶಾ ಯೋಗೇಶ್ವರ್ ಆರೋಪಿಸಿದ್ದಾರೆ. ಕುಟುಂಬದಿಂದ ತಮ್ಮನ್ನು ತಂದೆಯೇ ದೂರ ಮಾಡಿದ್ದಲ್ಲದೆ, ಕಿರಿಕಿರಿ ನೀಡುತ್ತಿದ್ದಾರೆ ಎಂದು ಆರೋಪಿಸಿ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.