ಸಾಮೂಹಿಕ ಅತ್ಯಾಚಾರಕ್ಕೊಳಗಾದ ಯುವತಿಯೊಬ್ಬಳು ಪೊಲೀಸರಿಗೆ ದೂರು ಸಲ್ಲಿಸಿ ಹಲವು ದಿನಗಳಾಗಿದ್ದರೂ ಆ ಬಗ್ಗೆ ಏನೂ ಕ್ರಮ ಕೈಗೊಳ್ಳದಕ್ಕೆ ಆ ಯುವತಿ ಪೊಲೀಸರು ಮತ್ತು ಆಡಳಿತದ ಮೇಲೆ ಒತ್ತಡ ಹೇರಲು ಯುವತಿ ನೀರಿನ ಟ್ಯಾಂಕ್ ಮೇಲೆ ಹತ್ತಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದ ನವಾಬ್ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನೊಯ್ಡಾದ ಉತ್ತರ ಪ್ರದೇಶದ ಗೊಂಡಾದಲ್ಲಿರುವ ವಿಭಾಗೀಯ ಆಯುಕ್ತರ ಕಚೇರಿಯ ನೀರಿನ ಟ್ಯಾಂಕ್ ಮೇಲೆ 18 ವರ್ಷದ ಯುವತಿ ಹತ್ತಿದ್ದಾಳೆ . ತನ್ನ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರ ನಿಷ್ಕ್ರಿಯತೆ ತೋರಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ.
ಪೊಲೀಸರ ಪ್ರಕಾರ, ಈ ಘಟನೆಯ ಬಗ್ಗೆ ಅಪ್ರಾಪ್ತೆಯ ತಾಯಿ ಡಿಸೆಂಬರ್ 2023ರಲ್ಲಿ ದೂರು ದಾಖಲಿಸಿದ್ದರು. ಮೂವರು ಸಹೋದರರು ಬೈಕ್ನಲ್ಲಿ ಬಂದುಗ ಬಂದೂಕು ತೋರಿಸಿ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದರು. ಈ ಬಗ್ಗೆ ಯಾವುದೇ ತನಿಖೆ ನಡೆದಿಲ್ಲ ಮತ್ತು ಆರೋಪಿಗಳನ್ನು ಬಂಧಿಸಿಲ್ಲ, ಪೊಲೀಸರು ನನ್ನ ಮೇಲೆ ಅತ್ಯಾಚಾರ ನಡೆಸಿದವರನ್ನು ರಕ್ಷಿಸುತ್ತಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ. ಸುಮಾರು 3 ಗಂಟೆಗಳ ಮನವೊಲಿಕೆ ನಂತರ ಈ ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ ಆ ಯುವತಿಯನ್ನು ಕೆಳಗಿಳಿಸಲಾಗಿದೆ.