ಬೆಂಗಳೂರು ಹೊರವಲಯದಲ್ಲಿ ನಡೆದ ರೇವ್ ಪಾರ್ಟಿ ಕೇಸ್ನಲ್ಲಿ ಹೈಡ್ರಾಮಾ ಮಾಡಿದ್ದ ನಟಿ ಹೇಮಾ ಅವರಿಗೆ ಸಂಕಷ್ಟ ಎದುರಾಗಿದೆ. ರೇವ್ ಪಾರ್ಟಿ ವೇಳೆ ಮಾದಕ ವಸ್ತು ಸೇವಿಸಿದ್ದ ಆರೋಪದಲ್ಲಿ ಅವರನ್ನು ಸಿಸಿಬಿ ಪೊಲೀಸರು ಇಂದು ಬಂಧಿಸಿದ್ದಾರೆ. ಬುರ್ಖಾ ಧರಿಸಿ ವಿಚಾರಣೆಗೆ ಬಂದ ನಟಿ ಹೇಮಾ.
ಕಾರಣ ಏನು ಗೊತ್ತಾ…?
- ನಟಿ ಹೇಮಾ ಅವರ ರಕ್ತ ಪರೀಕ್ಷೆಯಲ್ಲಿ ಮಾದಕ ವಸ್ತು ಸೇವನೆ ದೃಢವಾಗಿತ್ತು
- ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನಟಿ ಹೇಮಾ ಅವರಿಗೆ ನೋಟಿಸ್ ನೀಡಿತ್ತು
- ಸಿಸಿಬಿ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಆಗಮಿಸಿದ್ದರು
- ತನಿಖಾಧಿಕಾರಿ ಮುಂದೆ ಹಾಜರಾಗಿ ಹೇಳಿಕೆ ನೀಡಿರುವ ನಟಿ ಹೇಮಾ ಅವರನ್ನು ಸಿಸಿಬಿ ವಶಕ್ಕೆ ಪಡೆದಿದೆ
- ರೇವ್ ಪಾರ್ಟಿ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರೋಪ
- ಪೊಲೀಸರು ರೇಡ್ ಮಾಡಿದ್ದ ವೇಳೆ ವಿಡಿಯೋ ಮಾಡಿ ಪೊಲೀಸರ ತನಿಖೆಯ ದಿಕ್ಕು ತಪ್ಪಿಸಿದ್ದ ಪ್ರಕರಣ ದಾಖಲು
- ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಎರಡು ನೋಟಿಸ್ ನೀಡಿದ ಮೇಲೂ ಹೇಮಾ ಅವರು ಪೊಲೀಸರ ತನಿಖೆಗೆ ಹಾಜರಾಗಿರಲಿಲ್ಲ
- ಇಂದು ವಿಚಾರಣೆಗೆ ಹಾಜರಾದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದಿರುವ ನಟಿ ಹೇಮಾಗೆ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ವಿಚಾರಣೆ ಬಳಿಕ ಸಿಸಿಬಿ ಪೊಲೀಸರು ನಟಿ ಹೇಮಾ ಅವರನ್ನು ಬಂಧಿಸಿದ್ದಾರೆ.