- ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರು
- ನಟ ದರ್ಶನ್ ಬಂಧನಕ್ಕೆ ಸಂಬಂಧಿಸಿದಂತೆ ನಟ ಚೇತನ್ ಅಹಿಂಸಾ ಪ್ರತಿಕ್ರಿಯೆ
ಬೆಂಗಳೂರು: ಕೊಲೆ ಕೇಸ್ ನಲ್ಲಿ ನಟ ದರ್ಶನ್ ಬಂಧನಕ್ಕೆ ಸಂಬಂಧಿಸಿದಂತೆ ನಟ ಚೇತನ ಅಹಿಂಸಾ ಪ್ರತಿಕ್ರಿಯೆ ನೀಡಿದ್ದಾರೆ. ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರು ಎಂದು ಅಸಮಾಧಾನ ವ್ಯಕ್ತಪಡಸಿದ್ದಾರೆ. ಹೌದು ನಟ ದರ್ಶನರನ್ನು ನಿನ್ನೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಫೇಸ್ಬುಕ್ ನಲ್ಲಿ ಬರೆದುಕೊಂಡಿರುವ ನಟ, ಸಾಮಾಜಿಕ ಹೋರಾಟಗಾರ ಚೇತನಾ ಅಹಿಂಸಾ, ನಟ ದರ್ಶನ ಮತ್ತು ಆತನ ಸಹಚರರ ವಿರುದ್ಧ ಕೊಲೆ ಆರೋಪಗಳು ಗಂಭೀರವಾಗಿವೆ. ನಮ್ಮ ರಾಜ್ಯ ಪೊಲೀಸರು ಅದಕ್ಕೆ ಅನುಗುಣವಾಗಿ ತನಿಖೆ ನಡೆಸುತ್ತಾರೆ ಎಂದು ನಾವು ನಂಬುತ್ತೇವೆ. ಅಲ್ಲದೆ, ಚಲನಚಿತ್ರ ತಾರೆಯರು ಸುಮಾರು ಒಂದು ಶತಮಾನದಿಂದ ಅವರು ಪಡೆದಿರುವ ಜೀವನಕ್ಕಿಂತ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ. ಇಂತಹ ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರು ಎಂದು ಬರೆದುಕೊಂಡು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.