ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್ ಅವರನ್ನು ನಿರ್ಮಾಪಕ ಕೆ.ಮಂಜು ಭೇಟಿ ಮಾಡಿದರು. ನಂತರ ಮಾತನಾಡಿದ ಅವರು, ದರ್ಶನ್ ಯಾವ ತಪ್ಪು ಮಾಡಿಲ್ಲ ಎಂದು ಅವರ ಪರವಾಗಿ ಬ್ಯಾಟ್ ಬೀಸಿದ್ದಾರೆ.
ದರ್ಶನ್ ಭೇಟಿ ಬಳಿಕ ಮಾತನಾಡಿದ ನಿರ್ಮಾಪಕ ಕೆ. ಮಂಜು, ಎಲ್ಲಾ ಒಳ್ಳೆಯದಾಗುತ್ತದೆ ದೇವರಿದ್ದಾನೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ದರ್ಶನ್ ಜೈಲಿನಲ್ಲಿ ಹೇಗಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಮಾಡದ ತಪ್ಪಿಗೆ ಶಿಕ್ಷೆ ಅನುಭವಿಸುತ್ತಿದ್ದಾರೆ. ಏನೋ ಘಟನೆ ನಡೆದಿದೆ ಆದರೆ ಉದ್ದೇಶಪೂರ್ವಕವಾಗಿ ಕೊಲೆ ಮಾಡಿಲ್ಲ. ಕಾನೂನಿನ ಮೇಲೆ ನಮ್ಮಿಬ್ಬರಿಗೂ ನಂಬಿಕೆ ಇದೆ. ಸತ್ಯ ಏನೆಂದು ಜಗತ್ತಿಗೆ ಗೊತ್ತಾಗುತ್ತದೆ. ದರ್ಶನ್ ಶೀಘ್ರದಲ್ಲೇ ಹೊರಗೆ ಬರಲಿದ್ದಾರೆ. ನಮ್ಮ ವೈಯುಕ್ತಿಕ ವಿಚಾರಗಳನ್ನು ಮಾತನಾಡಿದ್ದೇವೆ. ಎಲ್ಲವನ್ನೂ ಹೇಳಲು ಆಗುವುದಿಲ್ಲ ಎಂದು ಹೇಳಿದ್ದಾರೆ.