- ದೇಶದ ಕಾನೂನು ಎಲ್ಲರಿಗೂ ಒಂದೇ, ಕಾನೂನಿನ ಮುಂದೆ ಎಲ್ಲರೂ ಸಮಾನರು
- ಸರ್ಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ದೇಶದ ಕಾನೂನು ಎಲ್ಲರಿಗೂ ಒಂದೇ, ಕಾನೂನಿನ ಮುಂದೆ ಎಲ್ಲರೂ ಸಮಾನರು, ರಾಷ್ಟ್ರಪತಿಯಾಗಲಿ, ಸ್ಟಾರ್ ಆಗಲಿ, ಕೂಲಿ ಕಾರ್ಮಿಕನೇ ಆಗಲಿ. ಸರ್ಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಉಡುಪಿಯಲ್ಲಿ ನಟ ದರ್ಶನ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಕಾನೂನಿನಲ್ಲಿ ಎಲ್ಲರೂ ಒಂದೇ. ಯಾರನ್ನು ರಕ್ಷಿಸುವ ಪ್ರಶ್ನೆ ಇಲ್ಲ. ರಾಜ್ಯ ಸರ್ಕಾರ ಕೂಡ ಯಾರ ಪರ ನಿಲ್ಲುವುದಿಲ್ಲ ಎಂದರು.