ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಇಂದು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿರ್ಗಮಿತ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿಂದ ತೆರವಾದ ಸ್ಥಾನಕ್ಕೆ ಈಗ ಸಂಜೀವ್ ಖನ್ನಾ ಏರುತ್ತಿದ್ದು, ಮೇ. 13, 2025 ರವರೆಗೆ ಅಧಿಕಾರದಲ್ಲಿ ಇರಲಿದ್ದಾರೆ. ನ್ಯಾ. ಖನ್ನಾ ಅವರ ತಂದೆ ದೇವ್ರಾಜ್ ಖನ್ನಾ ಕೂಡ ದೆಹಲಿ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿಯಾಗಿದ್ದರು.