2025 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಪುನರಾವರ್ತಿತ, ಫಲಿತಾಂಶ ಉತ್ತಮ ಪಡಿಸಿಕೊಳ್ಳುವ ಹಾಗೂ ಖಾಸಗಿ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು 12-12-2024 ದಿನಾಂಕದ ವರೆಗೆ 500+700=1200 ಇದರ ಜೊತೆಗೆ 1320/- ವಿಶೇಷ ದಂಡಶುಲ್ಕದೊಂದಿಗೆ ಅವಕಾಶ ನೀಡಲಾಗಿತ್ತು. ಆದರೆ ಪೋಷಕರು ಹಾಗೂ ವಿದ್ಯಾರ್ಥಿಗಳ ದೂರವಾಣಿ ಕರೆಗಳು ಹಾಗೂ ಮನವಿ ಮೇರೆಗೆ ಸದರಿ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ವಿಸ್ತರಿಸಿ ಆದೇಶಿಸಲಾಗಿದೆ.
ಈಗಾಗಲೇ ಹಲವು ಬಾರಿ ವಿಸ್ತರಿಸಿರುವುದರಿಂದ ಪರೀಕ್ಷಾ ಶುಲ್ಕ ಪಾವತಿಸುವ ದಿನಾಂಕವನ್ನು ಯಾವುದೇ ಕಾರಣಕ್ಕೂ ಪುನಃ ವಿಸ್ತರಿಸಲಾಗುವುದಿಲ್ಲ. ಇದು ಅಂತಿಮ ಅವಕಾಶವಾಗಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವಂತೆ ಪ್ರಾಂಶುಪಾಲರು ಕ್ರಮ ವಹಿಸಲು ಆದೇಶ ಹೊರಡಿಸಿದೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ.
ದ್ವಿತೀಯ ಪಿಯುಸಿ ಪರೀಕ್ಷೆ-1 ನೋಂದಣಿ ಗೆ ಕೊನೆ ದಿನಾಂಕ ಪ್ರಕಟವಾಗಿದೆ. 2025 ಮಾರ್ಚ್ ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲ್ಲಿದೆ. ಈ ಬಾರಿ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಹಾಗೂ ಖಾಸಗಿ ಕಾಲೇಜ್ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕವನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಆದೇಶ ಹೊರಡಿಸಿದೆ.