ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಭಾನುವಾರ ಪುತ್ತೂರು ಮಹಿಳಾ ಠಾಣೆ ಯಲ್ಲಿ ಕೇಸು ದಾಖಲಾಗಿದೆ. ಸುಮಾರು 47 ವರ್ಷದ ಮಹಿಳೆ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದಾರೆ. 2023 ಜೂನ್ನಲ್ಲಿ ಬೆಂಗಳೂರಿನ ಹೋಟೆಲ್ವೊಂದರಲ್ಲಿ ಪುತ್ತಿಲ ಅವರು ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಈ ವೇಳೆ ಫೋಟೋ, ಸೆಲ್ಟಿ, ವಿಡಿಯೋ ಮಾಡಿಕೊಂಡು, ಬಳಿಕ ಅವುಗಳನ್ನು ತೋರಿಸಿ ನನಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಐಪಿಸಿ ಕಲಂ 417, 354ಎ, 506 ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅರುಣ್ ಪುತ್ತಿಲರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗೆ ನಾನು ಬೆರಗಾಗಿದ್ದೆ. ಅವರ ಅಭಿಮಾನಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಕೂಡ ಮಾಡಿದ್ದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಪುತ್ತಿಲ ಮತ್ತು ಮಹಿಳೆಯೊಬ್ಬಳ ಆಡಿಯೋ ವೈರಲ್ ಆಗಿತ್ತು.
ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಹಿಂದುತ್ವದ ಹೆಸರಿನಲ್ಲಿ ಬಂಡಾಯ ಸ್ಪರ್ಧೆ ಮಾಡಿದ್ದ ಅರುಣ್ ಪುತ್ತಿಲ, ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದರು.