- ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಅವರು ನಿಧನ
- ಪ್ರತಿಭಟನೆ ವೇಳೆ ಹೃದಯಾಘಾತದಿಂದ ಭಾನುಪ್ರಕಾಶ್ ನಿಧನ
ಬಿಜೆಪಿ ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್(69) ಅವರು ನಿಧನರಾಗಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾನುಪ್ರಕಾಶ್ ಅವರು ಭಾಗಿಯಾಗಿದ್ದರು. ಪ್ರತಿಭಟನೆ ನಂತರ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಕೂಡಲೆ ಬಿಜೆಪಿ ಕಾರ್ಯಕರ್ತರು ಖಾಸಗಿ ಆಸ್ಪತ್ರೆಹೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಸ್ವಗ್ರಾಮ ಮತ್ತೂರಿಗೆ ಮೃತದೇಹ ರವಾನೆ ಮಾಡಲಾಗಿದೆ.