ಕರ್ನಾಟಕದಲ್ಲಿ 2024 ಲೋಕಸಭಾ ಚುನಾವಣಾ ಫಲಿತಾಂಶದ ಕಾವು ಜೋರಾಗಿದೆ. ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 1.70 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ. ರಾಘವೇಂದ್ರ ವಿರುದ್ಧ ಮೊದಲನೇ ಬಾರಿಗೆ ಗೀತಾ ಶಿವರಾಜ್ ಕುಮಾರ್ ಸೋತಿದ್ದಾರೆ. ಶಿವಮೊಗ್ಗದಲ್ಲಿ ನಾಲ್ಕನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ಬಿ ವೈ ರಾಘವೇಂದ್ರ ಗೆಲುವು ಸಾಧಿಸಿದ್ದಾರೆ.