- ಹಾವೇರಿಯ ಗುಂಡೇನಹಳ್ಳಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತ
- ಎಮ್ಮಿಹಟ್ಟಿ ಗ್ರಾಮದ ಮೃತರ ಮನೆಗಳಿಗೆ ಹೆಚ್ಡಿ ಕುಮಾರಸ್ವಾಮಿ ಭೇಟಿ
ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದ 9 ಜನರು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಭೇಟಿ ನೀಡಿದ್ದ ಕೇಂದ್ರ ಸಚಿವರಾದ HD ಕುಮಾರಸ್ವಾಮಿ ಅವರು, ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದ ಮೃತರ ಮನೆಗಳಿಗೆ ಭೇಟಿ ನೀಡಿದರು. ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬದ ಸದಸ್ಯರಿಗೆ ಕುಮಾರಸ್ವಾಮಿ ಸಾಂತ್ವನ ಹೇಳಿದರು.